ADVERTISEMENT

ಕೂಡುಮಂಗಳೂರು: ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 2:27 IST
Last Updated 4 ಜೂನ್ 2021, 2:27 IST
ಕೂಡುಮಂಗಳೂರು ಹಾರಂಗಿಗೆ ಹೋಗುವ ರಸ್ತೆ ಬದಿಯ ಚರಂಡಿಯಲ್ಲಿ ಮಳೆ ನೀರು ಉಕ್ಕಿ ಹರಿಯಿತು
ಕೂಡುಮಂಗಳೂರು ಹಾರಂಗಿಗೆ ಹೋಗುವ ರಸ್ತೆ ಬದಿಯ ಚರಂಡಿಯಲ್ಲಿ ಮಳೆ ನೀರು ಉಕ್ಕಿ ಹರಿಯಿತು   

ಕುಶಾಲನಗರ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಸಾಧಾರಣ ಮಳೆ ಸುರಿಯಿತು.

ಕೂಡುಮಂಗಳೂರು ಗ್ರಾಮದಲ್ಲಿ ಸುರಿದ ಜೋರು ಮಳೆಗೆ ಬಸವನತ್ತೂರು ಗ್ರಾಮದ ಗಾಯತ್ರಿ ಶೇಖರ್ ಅವರ ಮನೆ ಮುಂದಿನ ಬರೆ ಕುಸಿದಿದೆ. ಒಂದು ತಾಸಿಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಚರಂಡಿಯಲ್ಲಿ ನೀರು ತುಂಬಿ ರಸ್ತೆ ಮೇಲೆ ಹರಿದಿದೆ.

ಕೂಡುಮಂಗಳೂರು ಹಾರಂಗಿಗೆ ಹೋಗುವ ರಸ್ತೆಯಲ್ಲಿ ಚರಂಡಿ ತುಂಬಿ ಉಕ್ಕಿ ಹರಿದ ನೀರು ಎದುರುಗಡೆ ಇರುವ ರಮೇಶ್ ಎಂಬುವವರ ಮನೆಗೆ ನುಗ್ಗಿದೆ. ಇದರಿಂದ ಮನೆಯ ವಸ್ತುಗಳಿಗೆ ಹಾನಿಯಾಗಿದೆ. ಮನೆಯಿಂದ ನೀರು ಹೊರ ಹಾಕಲು ಮನೆಯ ಸದಸ್ಯರು ಹರಸಾಹಸಪಟ್ಟರು.

ADVERTISEMENT

ಕೂಡಿಗೆ, ಹೆಬ್ಬಾಲೆ, ಶಿರಂಗಾಲ ಹಾಗೂ ಸಿದ್ದಲಿಂಗಪುರ ವ್ಯಾಪ್ತಿಯಲ್ಲೂ ಮಳೆಯಾಗಿದೆ. ದಿಢೀರ್ ಬಂದ ಮಳೆಯಿಂದ ಜನಜೀವನ ಅಸ್ತವ್ಯಸ್ತ ವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ತರಕಾರಿ ಬೆಳೆಗೂ ಹಾನಿ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.