ADVERTISEMENT

ಸ್ಟೌ ಸ್ಫೋಟದಿಂದ ಗಾಯಗೊಂಡಿದ್ದ ನರ್ಸ್‌ ಸಾವು

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2018, 17:20 IST
Last Updated 23 ಡಿಸೆಂಬರ್ 2018, 17:20 IST
ಶೈಲಜಾ
ಶೈಲಜಾ   

ಸುಂಟಿಕೊಪ್ಪ: ಸೀಮೆಎಣ್ಣೆ ಸ್ಟೌ ಸ್ಫೋಟಗೊಂಡು ಗಾಯಗೊಂಡಿದ್ದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರ್ಸ್‌, ಕುಶಾಲನಗರದ ಹೆಬ್ಬಾಲೆಯ ಶೈಲಜಾ (30) ಶನಿವಾರ ಮೃತಪಟ್ಟಿದ್ದಾರೆ.

ಅವರು ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ಡಿ.5ರಂದು ಅಡುಗೆ ಮಾಡುತ್ತಿದ್ದ ವೇಳೆ ಸ್ಟೌ ಸ್ಫೋಟಗೊಂಡಿದೆ. ಈ ವೇಳೆ, ಶೈಲಜಾ ಅವರಿಗೆ ಸುಟ್ಟಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಅವರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಹೆಬ್ಬಾಲೆಯಲ್ಲಿ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.