ADVERTISEMENT

ಸೋಮವಾರಪೇಟೆ: ರಸ್ತೆ ಕಾಮಗಾರಿ ಪರಿಶೀಲಿಸಿದ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 14 ಮೇ 2025, 15:30 IST
Last Updated 14 ಮೇ 2025, 15:30 IST
ಸೋಮವಾರಪೇಟೆ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಅಧಿಕಾರಿಗಳು
ಸೋಮವಾರಪೇಟೆ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಅಧಿಕಾರಿಗಳು   

ಸೋಮವಾರಪೇಟೆ: ಮಾಗಡಿ–ಜಾಲ್ಸೂರು ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬ ಮತ್ತು ಕಳಪೆ ಕಾಮಗಾರಿ ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲ ಎಂಜಿನಿಯರ್‌ ವೆಂಕಟೇಶ್ ನಾಯಕ್ ತೋಳೂರುಶೆಟ್ಟಳ್ಳಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು.

ಸೋಮವಾರಪೇಟೆಯ ಅಲೆಕಟ್ಟೆ-ತೋಳೂರುಶೆಟ್ಟಳ್ಳಿ-ಕೂತಿ ಮಾರ್ಗದ ರಸ್ತೆಯ ವಿಸ್ತರಣೆ ಹಾಗೂ ಡಾಂಬರೀಕರಣ ಕಾಮಗಾರಿ ₹ 20 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. ತೋಳೂರುಶೆಟ್ಟಳ್ಳಿ ಗ್ರಾಮದಿಂದ ಹರಪಳ್ಳಿ ವರೆಗೆ 2.5 ಕಿ.ಮೀ ವರೆಗೆ ಮಾತ್ರ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯು ನಿದಾನಗತಿಯಲ್ಲಿ ನಡೆಯುತ್ತಿದ್ದು ಕೆಲವೆಡೆ ಕಳಪೆಯಾಗಿದೆ ಎಂದು ಆರೋಪಿಸಿ ಸೋಮವಾರ ಕೂತಿ–ತೋಳುರುಶೆಟ್ಟಲ್ಲಿ ಗ್ರಾಮಸ್ಥರು ಪರಿಶೀಲನೆಗೆ ಮನವಿ ಮಾಡಿದ್ದರು.

ಕಾಮಗಾರಿ ಪರಿಶೀಲನೆ ಸಂದರ್ಭ ಕೂತಿ ಗ್ರಾಮದ ಅಧ್ಯಕ್ಷ ಜಯರಾಮ್, ಸಾಮಾಜಿಕ ಕಾರ್ಯಕರ್ತ ಬಗ್ಗನ ಅನಿಲ್, ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ. ಸುರೇಶ್, ಮಲೆನಾಡು ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಪೃಥ್ವಿ ಗೌಡಳ್ಳಿ, ಕಾಫಿ ಬೆಳಗಾರರ ಸಂಘದ ಅಧ್ಯಕ್ಷ ಬಿ.ಎಂ. ಲವ, ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಕಿರಿಯ ಅಭಿಯಂತರ ಆರ್ಭಸ್, ಸಿವಿಲ್ ಎಕ್ಸ್‌ಪರ್ಟ್ ಟೆಸ್ಟಿಂಗ್ ಸೆಂಟರ್‌ನ ತಿಲಕ್ ಸೇರಿದಂತೆ ಹಲವರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.