ಸಿದ್ದಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಚೆನ್ನಯ್ಯನಕೋಟೆ ನಿವಾಸಿ ಎಂ. ಅಪ್ಪಯ್ಯ ಎಂಬುವವರ ಕಾಫಿ ತೋಟದಲ್ಲಿ ಕಾರ್ಮಿಕರಾಗಿದ್ದ ರಾಮು (65) ಅವರು ಕಾಫಿ ತೋಟದ ಕೆರೆಗೆ ಕಾಲು ತೊಳೆಯಲು ಹೋದ ಸಂದರ್ಭದಲ್ಲಿ ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.