ಸಿದ್ದಾಪುರ: ಬಾಡಗ ಬಾಣಂಗಾಲ ಗ್ರಾಮದಲ್ಲಿ ಜಾನುವಾರು ಕೊಂದ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತು.
ಗುರುವಾರ ಹುಲಿ ಸೆರೆಗೆ ಇಲಾಖೆಯಿಂದ ಬೋನು ಅಳವಡಿಸಿದ್ದು, ಹುಲಿಯು ಬೋನಿನ ಬಳಿ ಸುಳಿದಿಲ್ಲ.
ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪವಲಯ ಅರಣ್ಯಾಧಿಕಾರಿ ಶಶಿ ಸೇರಿದಂತೆ ಸಿಬ್ಬಂದಿ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದಾರೆ. ಶುಕ್ರವಾರ ರಾತ್ರಿ ಹುಲಿ ಬೋನಿನ ಬಳಿ ಬರುವ ಸಾಧ್ಯತೆ ಇದ್ದು, ಹುಲಿ ಸೆರೆಗೆ ಅರಣ್ಯ ಇಲಾಖಾ ಸಿಬ್ಬಂದಿ ಕಸರತ್ತು ನಡೆಸುತ್ತಿದ್ದಾರೆ.
ಹುಲಿ ಓಡಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಹುಲಿ ಸೆರೆ ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.