
ಸುಂಟಿಕೊಪ್ಪ: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಪಿಡಿಒ ಗೂಳಪ್ಪ ಕೂತಿನಾರ್ ಅವರ ಅವ್ಯವಹಾರ ಹಾಗೂ ಹಣ ದುರುಪಯೋಗವನ್ನು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತರಿಗೆ ದೂರು ನೀಡುವಂತೆ ಗ್ರಾಮಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಲಾಯಿತು.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಈ ನಿರ್ಣಯ ಸ್ವೀಕರಿಸಲಾಯಿತು.
ಪಂಚಾಯಿತಿಯ ಲೆಕ್ಕ ಪರಿಶೋಧನ ವರದಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿದ ಸಂದರ್ಭ ಹಣದುರುಪಯೋಗ ಕಂಡು ಬಂದಿದೆ. ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಜಗನ್ನಾಥ್ ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಿದರು. ವಸತಿ ಯೋಜನೆಗೆ ಫಲಾನುಭವಿಗಳಿಂದ ಹಣಪಡೆದಿರುವುದು, ಕೆಲಸ ಕಾರ್ಯಗಳಿಗೆ ಹಣಪಡೆದು ವಂಚಿಸಿರುವುದಾಗಿ ಗ್ರಾಮಸ್ಥರು ಆರೋಪಿಸಿದರು.
ರಸ್ತೆ, ಚರಂಡಿ, ಕುಡಿಯುವ ನೀರು,ವಸತಿ ಯೋಜನೆ ಹಾಗೂ ಒತ್ತುವರಿ ಕುರಿತಾದ ವಿಷಯಗಳ ಬಗ್ಗೆ ಗ್ರಾಮಸ್ಥರು ಆಕ್ರೋಶವನ್ನು ಹೊರಹಾಕಿದರು. ಎಮ್ಮೆಗುಂಡಿ ರಸ್ತೆ ಒತ್ತುವರಿಯಾಗಿದೆ, ಲ್ಯಾಂಡ್ ಆರ್ಮಿ ನಿರ್ಮಿಸಿದ ರಸ್ತೆ ಕಳಪೆ, ರಸ್ತೆ ಬದಿ ವಾಹನಗಳನ್ನು ನಿಲ್ಲಿಸುತ್ತಿದ್ದು ಸಂಚಾರ ಸಮಸ್ಯೆ ವಿಷಯಗಳನ್ನು ಪ್ರಸ್ತಾಪಿಸಿದರು. ನಾಕೂರು ಶಿರಂಗಾಲ ಗ್ರಾಮಕ್ಕೆ ಕನಿಷ್ಠ 3 ದಿನಕ್ಕೊಮ್ಮೆಯಾದರೂ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದರು.
ಕಾನುಬೈಲ್ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಮೂರ್ತಿ ಗ್ರಾಮಸಭೆಗೆ ನೋಡಲ್ ಅಧಿಕಾರಿಯಾಗಿದ್ದರು.. ಗ್ರಾಮಸ್ಥರಾದ ಶಾಂತಪ್ಪ, ಪಿ.ಎಂ.ಬಿಜು, ರಾಮಯ್ಯ, ಗಣೇಶ್ ವಿಷಯಗಳನ್ದು ಪ್ರು್ರಾಪಿಸಿದರು. ಪಂಚಾಯಿತಿ ಉಪಾಧ್ಯಕ್ಷ ಬಿ.ಈ.ಸತೀಶ್, ಬಿ.ಜಿ.ರಮೇಶ್. ಕೊಳೆಂಬೆ ಸುಭಾಷ್, ರಾಧಮಣಿ, ಸೀತೆ, ಪ್ರೇಮ ಮತ್ತು ಅರುಣಾಕುಮಾರಿ,ಪಿಡಿಒ ಆಸ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.