ADVERTISEMENT

ಜನ ಸುರಕ್ಷಾ ಅಭಿಯಾನ ಪ್ರಯೋಜನ ಪಡೆಯಿರಿ

ವಾಲ್ನೂರು ಗ್ರಾ.ಪಂ: ಜನ ಸುರಕ್ಷಾ ಆಂದೋಲನ ಕಾರ್ಯಕ್ರಮದಲ್ಲಿ ಕೊಡಗು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 6:59 IST
Last Updated 17 ಆಗಸ್ಟ್ 2025, 6:59 IST
ಸುಂಟಿಕೊಪ್ಪ ಸಮೀಪದ ವಾಲ್ನೂರು ಗ್ರಾಮ ಪಂಚಾಯತಿಯಲ್ಲಿ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು 
ಸುಂಟಿಕೊಪ್ಪ ಸಮೀಪದ ವಾಲ್ನೂರು ಗ್ರಾಮ ಪಂಚಾಯತಿಯಲ್ಲಿ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು    

ಸುಂಟಿಕೊಪ್ಪ: ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಜನ ಸುರಕ್ಷಾ ಅಭಿಯಾನ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್ ಸಲಹೆ ನೀಡಿದರು.

ವಾಲ್ನೂರು ಗ್ರಾಮದಲ್ಲಿ, ಮಡಿಕೇರಿಯ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ವಾಲ್ನೂರು ಶಾಖೆ ಸಹಯೋಗದಲ್ಲಿ ವಾಲ್ನೂರು ಗ್ರಾಮ ಪಂಚಾಯಿತಿ ಸಹಕಾರದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಜನ ಸುರಕ್ಷಾ ಅಭಿಯಾನ ‌ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ ₹20 ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ₹2 ಲಕ್ಷಗಳವರೆಗಿನ ವಿಮಾ ಮೊತ್ತವು, ಗ್ರಾಹಕರ ನಾಮಿನಿಗೆ ಸಿಗಲಿದೆ. ವಾರ್ಷಿಕವಾಗಿ ₹436 ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣ ಹೊಂದಿದರೆ ಅಂತವರ ನಾಮಿನಿಗೂ ₹2 ಲಕ್ಷ ವಿಮಾ ಮೊತ್ತ ಸಿಗಲಿದೆ. ಈ ಎರಡು ಯೋಜನೆ ಮಾಡಿಸಿಕೊಂಡಲ್ಲಿ ₹4 ಲಕ್ಷದವರೆಗಿನ ವಿಮಾಮೊತ್ತ ಸಿಗಲಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಅಲ್ಲದೆ, 60 ವಯಸ್ಸು ಆದ ನಂತರದಲ್ಲಿ ಪಿಂಚಣಿ ರೂಪದಲ್ಲಿ ₹1000ದಿಂದ ₹5 ಸಾವಿರವರೆಗಿನ ಪಿಂಚಣಿ ಹಣ ಸಿಗಬೇಕಾದರೆ ತಕ್ಷಣವೇ ಅಟಲ್ ಪಿಂಚಣಿ ಯೋಜನೆ ಮಾಡಿಸುವಂತೆ ತಿಳಿಸಿದರು.

ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿ ಅಲೋಕ್ ಸಿನ್ಹ ಮಾತನಾಡಿ, ಪ್ರತಿಯೊಬ್ಬರು ಮರು ಕೆವೈಸಿ ಕಡ್ಡಾಯವಾಗಿ ಮಾಡಿಸಬೇಕು. ಎಲ್ಲರೂ ತಮ್ಮ ಖಾತೆ ಇರುವ ಬ್ಯಾಂಕ್‌ಗಳಿಗೆ ತೆರಳಿ ಗುರುತಿನ ಚೀಟಿ, ಆಧಾರ್ ಕಾರ್ಡ್‌ ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ನಬಾರ್ಡ್‌ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತಿ ತಾಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಜಮಾಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕ ನಬಿ ತಿಳಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮನು ಮಹೇಶ್, ಪಿಡಿಒ ಮೇದಪ್ಪ ಮಾತನಾಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮತಿ ಮಂಜುಳ, ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕಿ ಪಬಿತ ಹಾಗೂ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.