ಸೋಮವಾರಪೇಟೆ: ಸಮೀಪದ ಕಾರೆಕೊಪ್ಪ ಗ್ರಾಮದಲ್ಲಿ ಸೋಮವಾರ ಸ್ಯಾಂಟ್ರೋ ಹಾಗೂ ಹೋಂಡಾ ಕಾರಿನ ನಡುವೆ ಡಿಕ್ಕಿಯಾಗಿ ಸ್ಯಾಂಟ್ರೋ ಕಾರಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ.
ಪಟ್ಟಣದ ನಿವಾಸಿ ಮಹಮ್ಮದ್ ಸಲೀಂ ಅವರು ಹೋಂಡಾ ಕಾರು ಹಾಗೂ ಸೋಮವಾರಪೇಟೆ ಪೊಲೀಸ್ ಠಾಣಾ ಸಿಬ್ಬಂದಿ ಅರುಣ್ ಅವರು ಸ್ಯಾಂಟ್ರೋ ಕಾರಿನಲ್ಲಿದ್ದರು. ಸ್ಯಾಂಟ್ರೋ ಕಾರಿನಲ್ಲಿದ್ದ ಅರುಣ್ ಹಾಗೂ ಮೂರ್ತಿ ಅವರ ತಲೆಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೋಂಡ ಕಾರಿನಲ್ಲಿದ್ದ ಸಲೀಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಇಬ್ಬರು ಪೊಲೀಸರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಪೊಲೀಸ್ ಇನ್‌ಸ್ಪೆಕ್ಟರ್ ಮುದ್ದುಮಹದೇವ, ಎಎಸ್ಐ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.