
ಗೋಣಿಕೊಪ್ಪಲು: ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ಬಡಾವಣೆಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ಪಟ್ಟಣದ ಮಹಾತ್ಮಗಾಂಧಿ ನಗರ, ಟಿ.ಆರ್.ರೋಡ್ ಮೊದಲಾದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಎ.ಎಸ್.ಪೊನ್ನಣ್ಣ, ‘₹36 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಗುಣಮಟ್ಟದ ಕಾಮಗಾರಿ ನಡೆಸಿ ಜನತೆಗೆ ಅನುಕೂಲ ಮಾಡಿಕೊಡಬೇಕು’ ಎಂದು ಹೇಳಿದರು. ಆದಷ್ಟು ಬೇಗನೆ ಕಾಮಗಾರಿ ಆರಂಭಿಸಿ ನಿಗದಿತ ಸಮಯದ ಒಳಗೆ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದೀರೀರ ನವೀನ್, ಹಿರಿಯ ಮುಖಂಡರಾದ ಮೂಕಳೇರ ಕುಶಾಲಪ್ಪ, ಶಾಜಿ ಅಚ್ಯುತನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲೀರ ರಶೀದ್, ತಾಲ್ಲೂಕು ಕಾಂಗ್ರೆಸ್ ಅಲ್ಲಸಂಖ್ಯಾತರ ಘಟಕದಕ ಅಧ್ಯಕ್ಷ ಜುನೈದ್, ಪಟ್ಟಣ ಸದಸ್ಯರಾದ ಕೋಳೇರ ಭಾರತಿ, ಮೂಕಳೇರ ಸುನಿತಾ, ರಾಶಿಕಾ, ಅಣ್ಣಳಮಾಡ ಹರೀಶ್, ಪೂವಣ್ಣ, ಅಜ್ಜಿಕುಟ್ಟೀರ ಪೊನ್ನು, ಮಂಜು ದೇವಯ್ಯ, ಅಯೂಬ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.