ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ ಬೊಮ್ಮಾಡುವಿನ ಗಿರಿಜನ ಆಶ್ರಮ ಶಾಲೆಯ ನೂತನ ಗ್ರಂಥಾಲಯ ಹಾಗೂ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ‘ಶಾಲೆ ಗ್ರಂಥಾಲಯವು ₹23 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಹಾಗೂ ವಸತಿ ಶಾಲೆ ಕಟ್ಟಡವನ್ನು ₹2 ಕೋಟಿ ಅನುದಾನದಲ್ಲಿ ನಿರ್ಮಾಣಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
‘ಸಮಾಜದ ಕಟ್ಟಕಡೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಆಶ್ರಮ ಶಾಲೆಗಳು ಬಹು ದೊಡ್ಡ ಕೊಡುಗೆ ನೀಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದೆ’ ಎಂದು ಹೇಳಿದರು.
‘ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಉತ್ತಮ ಪುಸ್ತಕಗಳನ್ನು ಓದಿ ಹೆಚ್ಚಿನ ಜ್ಞಾನ ಪಡೆದುಕೊಳ್ಳಬೇಕು. ವಸತಿ ಶಾಲೆ ಕಟ್ಟಡದಲ್ಲಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಮುನ್ನಡೆಯಬೇಕು’ ಎಂದು ತಿಳಿಸಿದರು.
ತಾಲ್ಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ನಾಲ್ಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಕಟ್ಟಿ ಕಾರ್ಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಯ್ಯ, ಕಾಂಗ್ರೆಸ್ ಮುಖಂಡರಾದ ರಮೇಶ್, ಸಿದ್ದು, ನಾಚಪ್ಪ, ನಿಖಿಲ್, ಮನು, ಚಿಮ್ಮಡಮಾಡ ರವಿ, ಕಾಡ್ಯಾಮಾಡ ಬೋಪಣ್ಣ, ಪಲ್ವಿನ್ ಪೂಣಚ್ಚ, ಜಮ್ಮಡ ಸೋಮಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.