ADVERTISEMENT

ಗೋಣಿಕೊಪ್ಪಲು: ಹಾಕಿ ಮೈದಾನ ನಿರ್ಮಾಣ ಕುರಿತು ಪೊನ್ನಣ್ಣ ಚರ್ಚೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 14:50 IST
Last Updated 14 ಜೂನ್ 2025, 14:50 IST
ಶಾಸಕ ಎ.ಎಸ್.ಪೊನ್ನಣ್ಣ ಅವರು ಶನಿವಾರ ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಮೈದಾನವನ್ನು ಪರಿಶೀಲಿಸಿದರು
ಶಾಸಕ ಎ.ಎಸ್.ಪೊನ್ನಣ್ಣ ಅವರು ಶನಿವಾರ ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಮೈದಾನವನ್ನು ಪರಿಶೀಲಿಸಿದರು   

ಗೋಣಿಕೊಪ್ಪಲು: ಇಲ್ಲಿನ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಮೈದಾನವನ್ನು ಶಾಸಕ ಎ.ಎಸ್.ಪೊನ್ನಣ್ಣ ಶನಿವಾರ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ‘ಶಾಲಾ ಮೈದಾನವನ್ನು ಉನ್ನತೀಕರಿಸಿ, ಹಾಕಿ ಆಟಕ್ಕೆ ಸೂಕ್ತವಾದ ಮೈದಾನ ನಿರ್ಮಿಸುವ ಕುರಿತು ಚರ್ಚಿಸಲಾಗಿದೆ. 2027ರಲ್ಲಿ ಅಜ್ಜಿಕುಟ್ಟಿರ ಕುಟುಂಬದವರು ಹಮ್ಮಿಕೊಂಡಿರುವ ಹಾಕಿ ಉತ್ಸವವನ್ನು ಇದೇ ಮೈದಾನದಲ್ಲಿ ನಡೆಸಲು ಚಿಂತನೆ ನಡೆಸಲಾಗುತ್ತಿದೆ. ವೈಜ್ಞಾನಿಕವಾಗಿ ಎಲ್ಲವನ್ನು ಪರಿಶೀಲಿಸಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಮಕ್ಕಳ ಕ್ರೀಡಾ ಭವಿಷ್ಯದ ದೃಷ್ಟಿಯಿಂದ ಮೈದಾನದ ಉನ್ನತೀಕರಣ ಹಾಗೂ ಸವಲತ್ತುಗಳನ್ನು ಒದಗಿಸುವುದು ನನ್ನ ಪ್ರಥಮ ಆದ್ಯತೆಯಾಗಿದ್ದು, ಮಕ್ಕಳಿಗೆ ಅನುಕೂಲ ಆಗುವಂತೆ ಇಲ್ಲಿ ಎಲ್ಲಾ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.