
ಹಣ
ಹಣ
ಮಡಿಕೇರಿ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ 6 ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡಂತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ.
ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್ ಬುಕ್ (face book: com/ karnatakasangeetanrutyaacdemy) ಮೂಲಕ ಪಡೆದು ವೆಬ್ ಸೈಟ್ (sangeetanritya academy. karnataka.gov.in) ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಡಿ. 20 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.