ADVERTISEMENT

ಕೊಡಗು ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮನ

ತಲಕಾವೇರಿಯಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 6:57 IST
Last Updated 6 ಫೆಬ್ರುವರಿ 2021, 6:57 IST
ಕೊಡಗು ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮನ
ಕೊಡಗು ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮನ   

ಮಡಿಕೇರಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡ್‌ಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು.

ಅವರ‌ ಪತ್ನಿ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ. ಸೋಮಣ್ಣ ಇದ್ದಾರೆ.

ರಾಷ್ಟ್ರಪತಿಯವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.
ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.