ADVERTISEMENT

ಜಿಲ್ಲೆಯಾದ್ಯಂತ ಪ್ರಧಾನಿ ಮೋದಿ ಜನ್ಮದಿನಾಚರಣೆ

ಮಕ್ಕಳಿಗೆ ಕಲಿಕಾ ಸಾಮಗ್ರಿ, ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 4:11 IST
Last Updated 18 ಸೆಪ್ಟೆಂಬರ್ 2025, 4:11 IST
ಕೊಡ್ಲಿಪೇಟೆ ವೃತ್ತದಲ್ಲಿ ಕೇಕ್ ಕತ್ತರಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಆಚರಿಸಿದರು
ಕೊಡ್ಲಿಪೇಟೆ ವೃತ್ತದಲ್ಲಿ ಕೇಕ್ ಕತ್ತರಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಆಚರಿಸಿದರು   

ಮಡಿಕೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಕೊಡಗು ಜಿಲ್ಲೆಯ ಹಲವೆಡೆ ವಿಶೇಷ ಕಾರ್ಯಕ್ರಮಗಳನ್ನು ನಡೆಸಿದರು.

ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ನಾಪೋಕ್ಲು ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಅಂಬಿ ಕಾರ್ಯಪ್ಪ ಹಾಗೂ ಸಹ ಪ್ರಮುಖರು ಹಾಗೂ ಬೂತ್ ಅಧ್ಯಕ್ಷರು, ಕಾರ್ಯಕರ್ತರು ಭಾಗಹಿಸಿದ್ದರು.ನರಿಯಂದಡ ಶಕ್ತಿ ಕೇಂದ್ರ ಚೆಯ್ಯಾಂಡಾಣೆಯ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಇರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಜನ್ಮ ದಿನ ಆಚರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಮನು ಕುಮಾರ್ ರೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ಶರತ್, ಮಂಡಲ ಕಾರ್ಯದರ್ಶಿ ಇಂದಿರಾ ಮೊನ್ನಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹೇಶ್, ಮೋಹಿನಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ADVERTISEMENT

ನಾಪೋಕ್ಲುವಿನ ಶ್ರೀ ಭಗವತಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಗಳಿಗೆ ಯಶಸ್ಸು ಹಾಗೂ ದೀರ್ಘಾಯುಷ್ಯ ಸಿಗಲಿ ಎಂದು ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪೂಜೆ ಸಲ್ಲಿಸಲಾಯಿತು. ಹಾಕತ್ತೂರು ಶಕ್ತಿ ಕೇಂದ್ರ ವತಿಯಿಂದ ಕಗ್ಗೋಡ್ಲು ಭಗವತಿ ದೇವಾಲಯದಲ್ಲಿ ಪೂಜೆ ನಡೆಸಲಾಯಿತು. ಬಿಜೆಪಿ ಶಕ್ತಿ ಕೇಂದ್ರ ಪೆರಾಜೆ ವತಿಯಿಂದ ಶಾಸ್ತಾವು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು. ನಂತರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಶಕ್ತಿ ಕೇಂದ್ರದ ಪ್ರಮುಖ್ ಸುಭಾಶ್ಚಂದ್ರ ಬಂಗಾರಕೋಡಿ, ದೇವಸ್ಥಾನದ ಸಹ ಕಾರ್ಯದರ್ಶಿ ಅಡ್ಕದ ಚಿನ್ನಪ್ಪ ಭಾಗವಹಿಸಿದ್ದರು.

ಮದೆನಾಡಿನ ಮದೆಮಾದುರಪ್ಪ ದೇವಸ್ಥಾನದಲ್ಲಿ ಶಕ್ತಿ ಕೇಂದ್ರದ ಪ್ರಮುಖರು ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಮೋದಿ ಅವರಿಗೆ ಹಾಗೂ ಭಾರತ ದೇಶಕ್ಕೆ ಒಲಿತಾಗಲಿ ಎಂದು ವಿಶೇಷ ಪೂಜೆ ನೆರವೇರಿಸಲಾಯಿತು.

ಬಾಲಂಬಿಯ ಯುವ ಕೇಸರಿ ಯುವಕ ಮಂಡಲದ ವತಿಯಿಂದ ನರೇಂದ್ರ ಮೋದಿ ಅವರ 75 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಬೂತ್ ಅಧ್ಯಕ್ಷ ದಿನೇಶ್ ಸಣ್ಣಮನೆ, ರೈತ ಮೋರ್ಚಾ ಅಧ್ಯಕ್ಷ ಶ್ರೀನಿವಾಸ ನಿಡಿಂಜಿ ಮತ್ತು ಯುವಕ ಮಂಡಲದ ಕಾರ್ಯಕರ್ತರು ಭಾಗವಹಿಸಿದ್ದರು.

ಕೊಡ್ಲಿಪೇಟೆ ವೃತ್ತದಲ್ಲಿ ಕೇಕ್ ಕತ್ತರಿಸುವ ಮೂಲಕ ಕಾರ್ಯಕರ್ತರು ಜನ್ಮ ದಿನ ಆಚರಿಸಿದರು.  ಈ ವೇಳೆ ಮುಖಂಡರಾದ ಮೋಕ್ಷಿತ್ ಹೊನ್ನುಗುಡಿ, ಅಶ್ವತ್ಥ್ ಬೆಂಬಳೂರು, ಭಗವಾನ್ ಕೊಡ್ಲಿಪೇಟೆ, ಶರತ್ ಚಂದ್ರ ಇದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಹಲವೆಡೆ ಬಿಜೆಪಿ ಕಾರ್ಯಕರ್ತರು ಬುಧವಾರ ಸ್ವಚ್ಛತಾ ಕಾರ್ಯ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.