ADVERTISEMENT

ಕೊಡಗು: ಮಡಿಕೇರಿಯಲ್ಲಿ ಗಾಂಧಿ ಚಿತಾಭಸ್ಮದ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2025, 6:00 IST
Last Updated 30 ಜನವರಿ 2025, 6:00 IST
<div class="paragraphs"><p>ಗಾಂಧಿ ಚಿತಾಭಸ್ಮದ ಮೆರವಣಿಗೆ</p></div>

ಗಾಂಧಿ ಚಿತಾಭಸ್ಮದ ಮೆರವಣಿಗೆ

   

ಮಡಿಕೇರಿ: ಹುತಾತ್ಮರ ದಿನಾಚರಣೆ ಪ್ರಯುಕ್ತ ಮಹಾತ್ಮ ಗಾಂಧಿ ಅವರ ಚಿತಾಭಸ್ಮವನ್ನು ನಗರದಲ್ಲಿ ಸಕಲ ಗೌರವಗಳೊಂದಿಗೆ ಗುರುವಾರ ಮೆರವಣಿಗೆ ಮಾಡಲಾಯಿತು.

ಜಿಲ್ಲಾಡಳಿತ, ಸರ್ವೋದಯ ಸಮಿತಿಯ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸೇವಾದಳದ ವಿದ್ಯಾರ್ಥಿಗಳು ಹಾಗೂ ಪೊಲೀಸ್ ವಾದ್ಯವೃಂದ ಭಾಗಿಯಾದರು. ಮೂರು ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸರು ಗೌರವ ಸಲ್ಲಿಸಿದರು‌.

ADVERTISEMENT

ಗಾಂಧಿ ಮಂಟಪದ ಆವರಣದಲ್ಲಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿ, ಗಾಂಧೀಜಿ ಅವರಿಗೆ ಪ್ರಿಯವಾದ ಭಜನೆಗಳನ್ನು ಶಾಲಾಮಕ್ಕಳು ಹಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.