ADVERTISEMENT

ಕೊಡಗು: 31ರ ತನಕ ಮದ್ಯ ಮಾರಾಟ ನಿಷೇಧ

ನ್ಯೂಸ್‌...

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 14:02 IST
Last Updated 21 ಮಾರ್ಚ್ 2020, 14:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲೆಯಾದ್ಯಂತ ಮಾರ್ಚ್‌ 31ರ ಮಧ್ಯರಾತ್ರಿಯ ವರೆಗೆ ಸಿಎಲ್-2 ಹಾಗೂ ಸಿಲ್-11(ಸಿ) ಸನ್ನದುಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ರೀತಿಯ ವೈನ್ ಟಾವರಿನ್, ಪಬ್‌ಗಳು ಹಾಗೂ ಮೈಕ್ರೋಬ್ರೀವರಿ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಏ.1ರ ವರೆಗೆ ದಾಸೋಹ, ಉರೂಸ್, ಸಂತೆ-ಜಾತ್ರೆ, ಸಾಮೂಹಿಕ ಪ್ರಾರ್ಥನೆ, ಜನ ಒಗ್ಗೂಡುವಿಕೆ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ನ್ಯಾಯಬೆಲೆ ಅಂಗಡಿಗಳಿಗೆ ರಜೆ:ಮಾರ್ಚ್‌ 22ರಂದು ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ರಜೆಯನ್ನು ನೀಡಲಾಗಿದೆ. ಈ ದಿನದ ವಿತರಣೆಯನ್ನು 24ರಂದು ನೀಡಲಾಗುವುದು ಎಂದು ಆಹಾರ ಇಲಾಖೆ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.