ADVERTISEMENT

ಕೊಡಗು | ಸಿಬಿಎಸ್‌ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 4:37 IST
Last Updated 18 ಫೆಬ್ರುವರಿ 2026, 4:37 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಡಿಕೇರಿ: ಕೊಡಗು ಜಿಲ್ಲೆಯ ಕೊಡಗು ವಿದ್ಯಾಲಯ, ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ, ಸೈನಿಕ ಶಾಲೆ, ಕೇಂದ್ರೀಯ ವಿದ್ಯಾಲಯಗಳಲ್ಲಿ ಏಪ್ರಿಲ್ 11ರವರೆಗೂ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ 10 ಮತ್ತು 12ನೇ ತರಗತಿಗಳ ಪರೀಕ್ಷೆ ನಡೆಯಲಿದೆ.

ಹೀಗಾಗಿ, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

ADVERTISEMENT

ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.