ಕುಶಾಲನಗರ: ಮುಸ್ಲಿಮರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಎಂದು ಒತ್ತಾಯಿಸಿ ಬುಧವಾರ ಸಂಜೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಶಾಲನಗರ ಶಾಖೆಯಿಂದ ಪ್ರತಿಭಟನೆ ನಡೆಸಲಾಯಿತು.
ಎಸ್‌ಡಿಪಿಐ ನಗರ ಅಧ್ಯಕ್ಷ ಜಾಕ್ರಿಯಾ ನೇತೃತ್ವದಲ್ಲಿ ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನಿಂದ ಅವರನ್ನು ಕೂಡಲೇ ವಜಾ ಮಾಡಬೇಕು. ಶಾಸಕ ಸ್ಥಾನವನ್ನು ರದ್ದು ಪಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಎಸ್‌ಡಿಪಿಐ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.