ಕುಶಾಲನಗರ: ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಗೆಳೆಯರ ಬಳಗ ಹಾಗೂ ಸಾರ್ವಜನಿಕರು ಸೆಸ್ಕ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಬಿ.ಎಂ. ರಸ್ತೆಯಲ್ಲಿ ಹಾಗೂ ಸುತ್ತಮುತ್ತ ವಿದ್ಯುತ್ ಸಮಸ್ಯೆಯಾಗಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಪುರಸಭೆ ಸದಸ್ಯ ವಿ.ಎಸ್ ಆನಂದ್ ಕುಮಾರ್ ಮಾತನಾಡಿ, ವಿದ್ಯುತ್ ಕಣ್ಣು ಮುಚ್ಚಾಲೆ ಆಡುತ್ತಿದ್ದು, ಇದರಿಂದ ಸಾವಿರಾರು ರೂಪಾಯಿಗಳ ಅಕ್ವೇರಿಯಂ ಮೀನುಗಳು ಸತ್ತು ಹೋಗಿವೆ. ಹಲವಾರು ಅಂಗಡಿಗಳ ಇನ್‌ವರ್ಟರ್ ಬಲ್ಬ್‌ಗಳು ಹಾಳಾಗಿವೆ. ಇವರ ನಿರ್ಲಕ್ಷದಿಂದ ಇಷ್ಟೊಂದು ಸಮಸ್ಯೆಗಳು ಉಂಟಾಗಿದ್ದು, ಕೂಡಲೇ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಚೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಮಾತನಾಡಿ, ಸಿಬ್ಬಂದಿ ನಿರ್ಲಕ್ಷದ ವಿಷಯ ಈಗ ಗಮನಕ್ಕೆ ಬಂದಿದ್ದು, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಬಳಗದ ಆಯುಬ್, ರಾಕಿ, ಚಂದನ್, ಸಂತೋಷ್ ಎಚ್.ಜೆ. ಗೋಪಾಲ್, ರಾಕೇಶ್, ನಿಜಾಂ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.