ADVERTISEMENT

ಕ್ಷಮೆ ಯಾಚನೆಗೆ ಒತ್ತಾಯಿಸಿ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ತಾಯಿ ನಿಂದನೆ ಆರೋಪ: ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 7:31 IST
Last Updated 7 ಸೆಪ್ಟೆಂಬರ್ 2025, 7:31 IST
ಕಾಂಗ್ರೆಸ್‌ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಘಟಕದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಶನಿವಾರ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು
ಕಾಂಗ್ರೆಸ್‌ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಘಟಕದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಶನಿವಾರ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು   

ಮಡಿಕೇರಿ: ಬಿಹಾರದಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್‌ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ನಿಂದಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಕುರಿತು ಕೂಡಲೇ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ.

ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಶನಿವಾರ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರು ಪತ್ರಕರ್ತೆಯೊಬ್ಬರ ಕುರಿತು ಲಘುವಾಗಿ ಮಾತನಾಡಿದ್ದಾರೆ. ಈ ವಿಷಯಕ್ಕೂ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ADVERTISEMENT

ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ‘ಮಹಿಳೆಯ ಅನುಕೂಲಕ್ಕಾಗಿ ಆಸ್ಪತ್ರೆಗಳ ಕುರಿತು ಪತ್ರಕರ್ತೆ ಪ್ರಶ್ನಿಸಿದರೆ ಅವರ ಕುರಿತೇ ಸಚಿವರೊಬ್ಬರು ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ತಾಯ್ತನದ ಅರಿವಿಲ್ಲವೇ’ ಎಂದು ಪ್ರಶ್ನಿಸಿದರು.

ಬಿಹಾರದಲ್ಲೂ ಪ್ರಧಾನಿಯವರ ತಾಯಿಯ ಬಗ್ಗೆ ಟೀಕಿಸಲಾಗಿದೆ. ಇವುಗಳನ್ನೆಲ್ಲ ನೋಡಿದರೆ ಕಾಂಗ್ರೆಸ್‌ಗೆ ಮಹಿಳೆಯರ ಬಗ್ಗೆ ಗೌರವ ಇಲ್ಲ ಎಂದು ಅನ್ನಿಸುತ್ತದೆ. ಕೂಡಲೇ, ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಸದಸ್ಯ ಉಮೇಶ್ ಸುಬ್ರಮಣಿ, ಸಬಿತಾ, ಶ್ವೇತಾ ಪ್ರಶಾಂತ, ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡಾದ ರಾಬಿನ್ ದೇವಯ್ಯ, ಜಗದೀಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.