ADVERTISEMENT

ಮಡಿಕೇರಿ |ಖಾಲಿ ಹುದ್ದೆ ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 5:27 IST
Last Updated 30 ಆಗಸ್ಟ್ 2025, 5:27 IST
ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವ ಫೆಡರೇಷನ್‌ನ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು
ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವ ಫೆಡರೇಷನ್‌ನ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು   

ಮಡಿಕೇರಿ: ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವ ಫೆಡರೇಷನ್‌ನ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಬದಲಾಗಿ, ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಂಡು ವಂಚಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಕೂಡಲೇ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕು. ಅದರಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.