ADVERTISEMENT

ಸೋಮವಾರಪೇಟೆ: ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸುರಕ್ಷಾ ಸಮಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಮೇ 2025, 13:52 IST
Last Updated 4 ಮೇ 2025, 13:52 IST
ಮಂಗಳೂರಿನಲ್ಲಿ ಈಚೆಗೆ ಹತ್ಯೆಗೀಡಾದ ಹಿಂದೂಪರ ಸಂಘಟನೆಯ ಮುಖಂಡ ಸುಹಾಸ್ ಶೆಟ್ಟಿ  ಹತ್ಯೆಯನ್ನು ಖಂಡಿಸಿ, ಹಿಂದೂ ಸುರಕ್ಷಾ ಸಮಿತಿ ಕಾರ್ಯಕರ್ತರು ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಮಂಗಳೂರಿನಲ್ಲಿ ಈಚೆಗೆ ಹತ್ಯೆಗೀಡಾದ ಹಿಂದೂಪರ ಸಂಘಟನೆಯ ಮುಖಂಡ ಸುಹಾಸ್ ಶೆಟ್ಟಿ  ಹತ್ಯೆಯನ್ನು ಖಂಡಿಸಿ, ಹಿಂದೂ ಸುರಕ್ಷಾ ಸಮಿತಿ ಕಾರ್ಯಕರ್ತರು ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ಸೋಮವಾರಪೇಟೆ: ಮಂಗಳೂರಿನಲ್ಲಿ ಈಚೆಗೆ ಹತ್ಯೆಗೀಡಾದ ಹಿಂದೂಪರ ಸಂಘಟನೆಯ ಮುಖಂಡ ಸುಹಾಸ್ ಶೆಟ್ಟಿ ಅವರ ಹತ್ಯೆಯನ್ನು ಖಂಡಿಸಿ, ಹಿಂದೂ ಸುರಕ್ಷಾ ಸಮಿತಿ ಕಾರ್ಯಕರ್ತರು  ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ  ಪ್ರತಿಭಟನೆ ನಡೆಸಿದರು.

ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಮಾತನಾಡಿ, ಸುಹಾಸ್ ಅವರ ಬಳಿಯಿದ್ದ ಆತ್ಮರಕ್ಷಣೆಯ ಶಸ್ತ್ರಗಳನ್ನು ತಿಂಗಳ ಹಿಂದೆ ಪೊಲೀಸರೇ ವಶಕ್ಕೆ ಪಡೆದಿದ್ದಾರೆ. ಈ ವಿಷಯ ತಿಳಿದ ಮತಾಂಧರು ಹೊಂಚು ಹಾಕಿ ಹತ್ಯೆ ಮಾಡಿದ್ದಾರೆ. ಇದು ಪೊಲೀಸ್ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಹತ್ಯೆಯ ಆರೋಪಿಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ನೀಡಬೇಕು. ಇಸ್ಲಾಮಿಕ್ ಭಯೋತ್ಪಾದನೆಯನ್ನು ಬೇರು ಸಹಿತ ಕೀಳಬೇಕು. ತಪ್ಪಿದ್ದಲ್ಲಿ ಹಿಂದೂ ಸಮಾಜ ಇನ್ನಷ್ಟು ತೊಂದರೆಗೆ ಸಿಲುಕಲಿದೆ. ರಾಜಕೀಯ ಬದಿಗಿಟ್ಟು ಇಡೀ ಹಿಂದೂಗಳು ಒಗ್ಗಟ್ಟಾಗಬೇಕಾದ ಅನಿವಾರ್ಯತೆಯಿದೆ ಎಂದರು.

 ಕೊಡಗಿನಲ್ಲಿ ಬಾಂಗ್ಲಾ ವಲಸಿಗರು ಅಸ್ಸಾಮಿಗರ ಸೋಗಿನಲ್ಲಿ ಬಂದು ನೆಲೆಸಿದ್ದಾರೆ. ಹಿಂದೂ ಸಮಾಜ ಭದ್ರತೆಯ ದೃಷ್ಟಿಯಿಂದ ಈಗಲೇ ಎಚ್ಚೆತ್ತುಕೊಳ್ಳಬೇಕಿದೆ. ಜಾತಿ ಬಿಟ್ಟು ಇಡೀ ಹಿಂದೂಗಳು ಒಗ್ಗಟ್ಟಾಗಬೇಕು ಎಂದು ಹಿಂದೂ ಪರ ಸಂಘಟನೆಯ ಮುಖಂಡ ಸುನಿಲ್ ಮಾದಾಪುರ ಸಲಹೆ ನೀಡಿದರು.

ADVERTISEMENT

ವಿವಿಧ ಸಂಘಟನೆಗಳ ಮುಖಂಡರಾದ ಸುಭಾಷ್ ತಿಮ್ಮಯ್ಯ, ಉಮೇಶ್ ಎಂ.ಬಿ., ಕೂತಿ ಪರಮೇಶ್, ದರ್ಶನ್ ಜೋಯಪ್ಪ, ಮಹೇಶ್ ತಿಮ್ಮಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.