ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಕುಶಾಲನಗರ: ಗುತ್ತಿಗೆದಾರನಿಗೆ ಪರವಾನಿಗೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಚೇರಿಯಲ್ಲಿ ಡಿ ಗ್ರೂಪ್ ನೌಕರ ಶರತ್ ಎಂಬಾತ ಕೂಡ್ಲೂರು ಸಮೀಪ ವೀರಭೂಮಿ ಬಳಿ ತನ್ನ ಮನೆಯಲ್ಲಿ ಗುತ್ತಿಗೆದಾರ ಲೈಸೆನ್ಸ್ ನೀಡಲು ರಾಘವೇಂದ್ರ ಎಂಬವರಿಂದ ₹10 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭ ಸಿಕ್ಕಿಬಿದ್ದಿದ್ದಾನೆ.
ಗುತ್ತಿಗೆದಾರ ಲೈಸೆನ್ಸ್ ನೀಡಲು ಒಟ್ಟು ₹14 ಸಾವಿರಗಳಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು.
ಲೋಕಾಯುಕ್ತ ಎಸ್‌ಪಿ ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ದಿನಕರ ಶೆಟ್ಟಿ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ವೀಣಾ ನಾಯಕ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.