ADVERTISEMENT

ರಸಪ್ರಶ್ನೆ ಸ್ಪರ್ಧೆ: ಕೇಂದ್ರೀಯ ವಿದ್ಯಾಲಯ ತಂಡ ಪ್ರಥಮ

ಜಿಲ್ಲಾ ಮಟ್ಟದ ಯುವಜನೋತ್ಸವ- ಏಡ್ಸ್ ಅರಿವು ಮಾಸಾಚರಣೆ ಅಂಗವಾಗಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 13:40 IST
Last Updated 10 ಸೆಪ್ಟೆಂಬರ್ 2024, 13:40 IST
ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಿಂದ ಮಡಿಕೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು
ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಿಂದ ಮಡಿಕೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು   

ನಾಪೋಕ್ಲು: ‌ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ ಯುವಜನೋತ್ಸವ- ಎಚ್ಐವಿ ಏಡ್ಸ್ ಅರಿವು ಮಾಸಾಚರಣೆ- 2024ರ ಅಂಗವಾಗಿ ಮಡಿಕೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಡಿಕೇರಿ ಕೇಂದ್ರೀಯ ವಿದ್ಯಾಲಯದ ಕೆ. ಸರ್ವದ್ ಶೆಣೈ ಮತ್ತು ನಹುಷ ಭೂಷಣ್ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಈ ತಂಡ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ಹಾಗೂ ₹6000 ನಗದು ಪುರಸ್ಕಾರ ಪಡೆದುಕೊಂಡಿತು. ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೆ.ಜಿ.ಸಿಂಜನ್ ಹಾಗೂ ಬಿ.ಎಸ್.ಆದಿತ್ಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಕುಶಾಲನಗರದ ಫಾತಿಮ ಪ್ರೌಢಶಾಲೆಯ ಜೆಸಿಕಾ ಮನೋಜ್ ಮತ್ತು ಜೋಮಾ ಪಿ. ಜೋಸೆಫ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪಿಯು ಕಾಲೇಜಿನ ಸಚಿನ್ ಹಾಗೂ ಅಬ್ದುಲ್ ಮನಾಫ್ ತಂಡ ಸಮಾಧಾನಕರ ಬಹುಮಾನ ಪಡೆದರು.

ADVERTISEMENT

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ 25 ಪ್ರೌಢಶಾಲೆಗಳ 50 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ₹6,000 ನಗದು ಹಾಗೂ ಟ್ರೋಫಿ ವಿತರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ₹5,000 ನಗದು ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ತಂಡ ₹4000 ನಗದು ಹಾಗೂ ಟ್ರೋಫಿ ಪಡೆದುಕೊಂಡರು.

ರಸಪ್ರಶ್ನೆ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸತೀಶ್ ಮಾತನಾಡಿ, ‘ಜಿಲ್ಲೆಯಲ್ಲಿ ಏಡ್ಸ್ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಎಚ್ಐವಿ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಸಹಾಯವಾಣಿ ಬಗ್ಗೆ ಮಾಹಿತಿ ನೀಡುವುದು, ಏಡ್ಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಕಾಯ್ದೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ’ ಎಂದರು.

ಆರ್‌ಸಿಎಚ್ ಅಧಿಕಾರಿ ಡಾ. ಮಧುಸೂದನ್, ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ  ಸ್ಪರ್ಧೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.