ADVERTISEMENT

ಕೊಡಗಿನಲ್ಲಿ ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 10:56 IST
Last Updated 8 ಏಪ್ರಿಲ್ 2020, 10:56 IST
ನಾಪೋಕ್ಲು ಸಮೀಪದ ಬೇತು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ರಭಸದ ಮಳೆ ಸುರಿಯಿತು 
ನಾಪೋಕ್ಲು ಸಮೀಪದ ಬೇತು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ರಭಸದ ಮಳೆ ಸುರಿಯಿತು    

ಮಡಿಕೇರಿ: ಕೊಡಗು ಜಿಲ್ಲೆಯ ಅಲ್ಲಲ್ಲಿ ಬುಧವಾರ ಮಧ್ಯಾಹ್ನ ಮಳೆ ಸುರಿಯಿತು.

ನಾಪೋಕ್ಲು ಹೋಬಳಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಮಧ್ಯಾಹ್ನ 1.30ರಿಂದ ಆರಂಭಗೊಂಡ ಮಳೆ, ಅರ್ಧ ಗಂಟೆ ಆರ್ಭಟಿಸಿತು. ಬೇತು, ಬಲಮುರಿ, ಕೈಕಾಡು ಭಾಗಗಳಲ್ಲೂ ರಭಸದ ಮಳೆಯಾಗಿದೆ.

ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಶನಿವಾರಸಂತೆ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.