ADVERTISEMENT

ಕೊಡಗಿನ ವಿವಿಧೆಡೆ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 15:16 IST
Last Updated 29 ಜುಲೈ 2020, 15:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಂದು ವಾರದಿಂದ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕು ಪಡೆದಿದೆ.

ನಾಪೋಕ್ಲು, ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನದ ನಂತರ ನಿರಂತರ ಮಳೆಯಾಗಿದೆ. ಕೂಡಿಗೆ, ಹೆಬ್ಬಾಲೆ, ಶಿರಂಗಾಲ, ಗೋಣಿಕೊಪ್ಪಲು, ಪೊನ್ನಂಪೇಟೆ ಭಾಗದಲ್ಲೂ ಉತ್ತಮ ಮಳೆಯಾಗಿದ್ದು ಮಡಿಕೇರಿ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ಕೊಡಗಿನಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರ ಹವಾಮಾನ ಘಟಕವು ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.