ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಾವೇರಿ, ಲಕ್ಷ್ಮಣತೀರ್ಥ ನದಿಗಳಲ್ಲಿ ಮತ್ತೆ ನೀರಿನಮಟ್ಟ ಏರಿಕೆಯಾಗಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿ, ನಾಪೋಕ್ಲು ಭಾಗದಲ್ಲಿ ಶನಿವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಭರ್ತಿಯಾಗಿದೆ. ಇದೇ ರೀತಿ ಮಳೆಯ ಅಬ್ಬರ ಮುಂದುವರಿದರೆ ಕೊಡಗಿನಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ.
ತಿತಿಮತಿಯ ಕೋಣನಕಟ್ಟೆ ರಸ್ತೆಯ ಮರಪಾಲದ ಬಳಿ ಭಾರಿ ಗಾತ್ರದ ಮರ ಉರುಳಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಹಾರಂಗಿ ಜಲಾನಯನ ಪ್ರದೇಶದಲ್ಲೂ ನಿರಂತರ ಮಳೆ ಸುರಿಯುತ್ತಿದ್ದು ಹಾರಂಗಿ ಜಲಾಶಯದ ಒಳಹರಿವು ಏರಿದೆ. ಜಿಲ್ಲೆಯಲ್ಲಿ ಇನ್ನೂಎರಡು ದಿನ ಭಾರಿ ಮಳೆ ಸುರಿಯುವ ಸಾಧ್ಯತೆಯಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.