ADVERTISEMENT

ಭಾರಿ‌ ಮಳೆ: ನದಿ ದಡದ ನಿವಾಸಿಗಳಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 28 ಮೇ 2025, 3:52 IST
Last Updated 28 ಮೇ 2025, 3:52 IST
ನದಿ ದಡದ ನಿವಾಸಿಗಳಿಗೆ ಕಂದಾಯ ಇಲಾಖೆ ನೋಟಿಸ್ ನೀಡಿದರು
ನದಿ ದಡದ ನಿವಾಸಿಗಳಿಗೆ ಕಂದಾಯ ಇಲಾಖೆ ನೋಟಿಸ್ ನೀಡಿದರು   

ಸಿದ್ದಾಪುರ: ಭಾರಿ‌ ಮಳೆಗೆ ಕಾವೇರಿ ನದಿ ನೀರು ಏರಿಕೆಯಾಗಿದ್ದು, ನದಿ ದಡದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನೋಟಿಸ್ ನೀಡಲಾಗಿದೆ.

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ನದಿ ನೀರಿನ‌ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕರಡಿಗೋಡು ಚಿಕ್ಕನಹಳ್ಳಿ ರಸ್ತೆಯಲ್ಲಿ ನೀರು ನುಗ್ಗಿದ್ದು, ಪ್ರವಾಹದ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಕರಡಿಗೋಡು, ಗುಹ್ಯ, ಹಚ್ಚಿನಾಡು, ಹಾಲುಗುಂದ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯ ನದಿ ನಡದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕಂದಾಯ ಇಲಾಖೆ ನೋಟಿಸ್ ಜಾರಿ ಮಾಡಿದೆ.

ADVERTISEMENT
ಕಾವೇರಿ ನದಿ ನೀರಿನ‌ಮಟ್ಟ ಏರಿಕೆಯಾಗಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.