ADVERTISEMENT

ಮಡಿಕೇರಿ | ಆಧುನಿಕ ಭಾರತದ ಶಿಲ್ಪಿ ರಾಜೀವ್ ಗಾಂಧಿ: ತೆನ್ನಿರ ಮೈನಾ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 5:12 IST
Last Updated 21 ಆಗಸ್ಟ್ 2025, 5:12 IST
ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿದರು
ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿದರು   

ಮಡಿಕೇರಿ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕಗಳ ವತಿಯಿಂದ ಬುಧವಾರ ನಡೆದ ರಾಜೀವ್ ಗಾಂಧಿ ಅವರ 81ನೇ ಹಾಗೂ ದೇವರಾಜ್ ಅರಸು ಅವರ 110ನೇ ಜನ್ಮದಿನಾಚರಣೆ ನಡೆಯಿತು.

ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ‘ಆಧುನಿಕ ಭವ್ಯ ಭಾರತದ ಶಿಲ್ಪಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ’ ಎಂದು ತಿಳಿಸಿದರು.

ದೇವರಾಜ್ ಅರಸು ಅವರು ಸಮಾನತೆಯ ಹರಿಕಾರರಾಗಿ ತಮ್ಮ ಹೆಸರನ್ನು ಚಿರಸ್ಥಾಯಿಗೊಳಿಸಿದ್ದಾರೆ ಎಂದು ಹೇಳಿದರು.

ADVERTISEMENT

ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ, ‘ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಅವರ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು’ ಎಂದು ಕರೆ ನೀಡಿದರು.

ಮಡಿಕೇರಿ ತಾಲ್ಲೂಕು ಅಕ್ರಮ, ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಮಾತನಾಡಿ, ‘ದೇವರಾಜ್ ಅರಸು ಅವರಿಗೆ ಸಮಾನವಾದ ಮತ್ತೊಬ್ಬ ಮುಖ್ಯಮಂತ್ರಿಯನ್ನು ಈ ರಾಜ್ಯ ಮತ್ತು ದೇಶದಲ್ಲಿ ಕಾಣಲು ಸಾಧ್ಯವಿಲ್ಲ’ ಎಂದರು.

ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷ ಜಿ.ಸಿ.ಜಗದೀಶ್, ಸೇವಾ ದಳದ ಜಿಲ್ಲಾಧ್ಯಕ್ಷ ಕಾನೆ ಹಿತ್ಲು ಮೊಣ್ಣಪ್ಪ ಮಾತನಾಡಿದರು.

ಕೆಡಿಪಿ ಸದಸ್ಯರಾದ ಬಾಚಿಮಂಡ ಲವ ಚಿಣ್ಣಪ್ಪ, ನಗರ ಸಭಾ ಸದಸ್ಯ ಮಂಡಿರ ಸದಾ ಮುದ್ದಪ್ಪ, ಯಾಕುಬ್, ಮುದ್ದುರಾಜ್, ಅನುಷ್ಠಾನ ಸಮಿತಿ ಸದಸ್ಯ ಪ್ರಭು ರೈ, ಕೆ.ಜಿ.ಪೀಟರ್, ಮಾಜಿ ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಎಸ್.ಸಿ.ಘಟಕದ ಅಧ್ಯಕ್ಷರಾದ ಜಯೇಂದ್ರ, ಆದಂ, ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೊಳಿ, ಮುಖಂಡರಾದ ರವಿಗೌಡ, ವಸಂತ್ ಭಟ್, ಶಶಿ, ಸ್ವರ್ಣ ಲತಾ, ಮೂಡಾ ಸದಸ್ಯೆ ಮೀನಾಜ್ ಪ್ರವೀಣ್, ಮುನೀರ್ ಮಾಚರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.