
ಪ್ರಜಾವಾಣಿ ವಾರ್ತೆ
ಮಡಿಕೇರಿ: ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಮೈದಾನದಲ್ಲಿ ನಗರದ ವಿವಿಧ ಯೋಗ ಸಂಸ್ಥೆಗಳ ವತಿಯಿಂದ ಭಾನುವಾರ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.
ಯೋಗ ಭಾರತಿ ಮತ್ತು ಯೋಗ ಸಂಧ್ಯಾ, ವಿದ್ಯಾಭವನ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ ಸಮಿತಿ ಬಾಲಭವನ ಮಾರ್ನಿಂಗ್ ಸ್ಟಾರ್ಸ್ ಮ್ಯಾನ್ಸ್ ಕಾಂಪೌಂಡ್ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಮಂದಿ ಸೂರ್ಯನಮಸ್ಕಾರ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.