ವಿರಾಜಪೇಟೆ: ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಸಂಬಂಧಿಸಿದಂತೆ ಪಡಿತರ ಚೀಟಿದಾರರ ಇ- ಕೆವೈಸಿಯ ಪ್ರಗತಿಯು ಬಾಕಿ ಉಳಿದಿದ್ದು, ಸರ್ಕಾರದ ಅದೇಶದಂತೆ ಕೆವೈಸಿ ಮಾಡಲು ಜೂ 30 ಕೊನೆಯ ದಿನಾಂಕವಾಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ತಮ್ಮ ಆಧಾರ್ ಕಾರ್ಡ್ ನೊಂದಿಗೆ ಆಯಾ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ತೆರಳಿ ಇ- ಕೆವೈಸಿ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆಹಾರ ನಿರೀಕ್ಷಕಿ ಸೀನಾ ಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.