ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಸೆ. 11ರ ಬೆಳಿಗ್ಗೆ 8.30ರ ತನಕ ‘ರೆಡ್ ಅಲರ್ಟ್’ ಇದೆ. ಈ ಸಂದರ್ಭದಲ್ಲಿ 204.5 ಮಿ.ಮೀಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆಯಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೋರಿದೆ.
ತುರ್ತು ಸೇವೆಗೆ ಕಂಟ್ರೋಲ್ ರೂಂ.: 08272 221077 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.