
ಪ್ರಜಾವಾಣಿ ವಾರ್ತೆಮಡಿಕೇರಿ: ಭಾರತೀಯ ರೆಡ್‍ಕ್ರಾಸ್‍ನ ಕೊಡಗು ಘಟಕದಿಂದ ಜ. 10ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಅಂಗನವಾಡಿಗಳ ಸಾಧಕಿ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 15 ಸಾಧಕಿ ಕಾರ್ಯಕರ್ತೆಯರಿಗೆ ಶಾಸಕ ಡಾ.ಮಂತರ್‌ಗೌಡ ಅವರು ಸನ್ಮಾನ ನೆರವೇರಿಸಲಿದ್ದು, ಮಡಿಕೇರಿ ನಗರಸಭೆಯ ಅಧ್ಯಕ್ಷೆ ಕಲಾವತಿ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಭಾರತೀಯ ರೆಡ್‍ಕ್ರಾಸ್ ಕೊಡಗು ಸಭಾಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ರೆಡ್‍ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ಉಪಾಧ್ಯಕ್ಷ ಎಚ್.ಟಿ.ಅನಿಲ್, ಪ್ರಧಾನ ಕಾರ್ಯದರ್ಶಿ ಎಂ.ಧನಂಜಯ್, ಖಜಾಂಜಿ ಪ್ರಸಾದ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.