ಕುಶಾಲನಗರ: ‘ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ದೇಶದ ಪ್ರತಿಯೊಬ್ಬ ಪ್ರಜೆಗೂ ಸಹ ಸಮಾನ ಶಿಕ್ಷಣ, ಪ್ರತಿಯೊಬ್ಬರಿಗೂ ಬೇಕಾದ ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ಸಿಕ್ಕಿದೆ. ಸಂವಿಧಾನ ಎಂಬುದು ಭಾರತದ ಸರ್ವೋಚ್ಛ ಕಾನೂನು ಆಗಿದೆ’ ಎಂದು ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ ಹೇಳಿದರು.
ಇಲ್ಲಿನ ಮಹಾಲಕ್ಷ್ಮಿ ಸಭಾಂಗಣದಲ್ಲಿ ಭಾನುವಾರ ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿವೃತ್ತ ನೌಕರರ ಸಂಘದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲಾ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ಕಾರ್ಯಕ್ರಮ ಉದ್ಘಾಟಿಸಿದರು.
ದಲಿತ ಸಂಘರ್ಷ ಸಮಿತಿ ಮುಖಂಡ ಹಾನಗಲ್ಲು ಜಯಪ್ಪ ಅವರು ಸಂವಿಧಾನದ ಪೀಠಿಕೆ ವಾಚಿಸಿದರು.
ಈ ಸಂದರ್ಭ ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಬಿ.ಸಿ.ರಾಜು, ಕಾರ್ಯದರ್ಶಿ ಯು.ಟಿ.ರಾಮಯ್ಯ, ಖಜಾಂಚಿ ನಿಂಗರಾಜು, ನಿರ್ದೇಶಕ ಸರೋಜಾ, ಎಚ್.ಆರ್.ನಾಗೇಶ್ ಕೃಷ್ಷಪ್ಪ, ಸ್ವಾಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.