ADVERTISEMENT

ಮಡಿಕೇರಿ | ಪ್ರೌಢಶಾಲೆಗಳಿಗೆ 2,500 ಶಿಕ್ಷಕರ ನೇಮಕಾತಿ: ಸಚಿವ ನಾಗೇಶ್

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 7:24 IST
Last Updated 26 ಜನವರಿ 2023, 7:24 IST
   

ಮಡಿಕೇರಿ: ಜಿಲ್ಲಾಡಳಿತ ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ ಧ್ವಜಾರೋಹಣ ನೆರವೇರಿಸಿದರು.

ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಪ್ರೌಢಶಾಲೆಗಳಿಗೆ 2,500 ಶಿಕ್ಷಕರು, ಪಿಯು ಕಾಲೇಜುಗಳಿಗೆ 789 ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT