ಮಡಿಕೇರಿ: ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಲ್ಲಿ ಮನವಿ ಮಾಡಿದರು.
ಬೆಂಗಳೂರಿನ ವಿಕಾಸಸೌಧದ ಸಚಿವರ ಕೊಠಡಿಯಲ್ಲಿ ಸೋಮವಾರ ಸಚಿವರನ್ನು ಭೇಟಿ ಮಾಡಿದ ಅವರು ಮನವಿ ಸಲ್ಲಿಸಿದರು.
ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ ಪಿ ನಂಬರ್‌ಗಳ ಸಮಸ್ಯೆಯನ್ನು ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ ಕಂದಾಯ ಕಾಯ್ದೆ 1964 ಕ್ಕೆ ತರಬೇಕೆಂದು ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮನವಿ ಸ್ವೀಕರಿಸಿದ ಸಚಿವ ಕೃಷ್ಣ ಬೈರೇಗೌಡ, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದು ಎಂಬ ಭರವಸೆಯನ್ನು ನೀಡಿದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.