
ಕುಶಾಲನಗರ: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್‌ಜೀತ್ ಸಿಂಗ್ ಅವರು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ಪ್ರಗತಿ ಕುರಿತು ಚರ್ಚೆ ನಡೆಸಿದರು.
ಕೂಡಿಗೆ ಕೃಷಿ ಫಾರಂ ಆವರಣದಲ್ಲಿ 2007ರಲ್ಲಿ ಆರಂಭಗೊಂಡು ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಸೈನಿಕ ಶಾಲೆ ಶೈಕ್ಷಣಿಕ ಹಾಗೂ ಸರ್ವಾಂಗೀಣ ಪ್ರಗತಿ ಸಾಧಿಸುತ್ತಿರುವ ಕುರಿತು ಸಂಸದರಿಗೆ ಮಾಹಿತಿ ನೀಡಿದರು.
ಶಾಲೆಯ ಪರಿಣಾಮಕಾರಿ ಕಾರ್ಯನಿರ್ವಹಣೆ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಹಾಗೂ ನೌಕಾ ಅಕಾಡೆಮಿ (ಐಎನ್‌ಎ)ಗೆ ಸೇರ್ಪಡೆಯಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯ ಏರಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದಾದ್ಯಂತ ದೇಶಸೇವೆಯಲ್ಲಿ ತೊಡಗಿರುವ ಹಳೆಯ ವಿದ್ಯಾರ್ಥಿಗಳ ಸಾಧನೆಗಳನ್ನು ವಿವರಿಸಿದರು.
ಶಾಲೆಯ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರೂ ಆಗಿರುವ ಸಂಸದರು, ಶಾಲೆ ಬೆಳವಣಿಗೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಸಂತಸ ವ್ಯಕ್ತಪಡಿಸಿದ್ದು, ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿ, ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.