
ಪ್ರಜಾವಾಣಿ ವಾರ್ತೆ
ಕುಶಾಲನಗರ: ಪಟ್ಟಣದ ರಥಬೀದಿಯ ಗೋಲ್ಡನ್ ಟೆಂಪಲ್ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ ಪ್ರಪ್ರಥಮ ಬಾರಿಗೆ ಶತ ಚಂಡಿಕಾಯಾಗ ಹಮ್ಮಿಕೊಳ್ಳಲಾಗಿದೆ.
ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿ ಹಮ್ಮಿಕೊಳ್ಳಲಾಗಿದೆ. ‘ಲೋಕಕಲ್ಯಾಣಾರ್ಥ ಶತಚಂಡಿಕಾ ಯಾಗ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಿಕಾ ಪರಮೇಶ್ವರಿ ದೇವಾಲಯ ಅರ್ಚಕ ಗಿರೀಶ್ ಭಟ್ ಹೇಳಿದರು.
ಮೇ 22 ರಿಂದ 26 ರ ತನಕ ವಿವಿಧ ಪೂಜಾ ಕೈಂಕರ್ಯ, ಹೋಮಹವನಗಳು ನೆರವೇರಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿ ಸೇರಿ ಸಮಿತಿಗಳ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.