ADVERTISEMENT

ಮಡಿಕೇರಿ: ಕತ್ತಲೆಕಾಡು ಸಮೀಪ ಭೀಕರ ಅಪಘಾತ, ಇಬ್ಬರ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 5:09 IST
Last Updated 13 ಜುಲೈ 2022, 5:09 IST
ಅಪಘಾತದಿಂದ ನುಜ್ಜುಗುಜ್ಜಾಗಿರುವ ವಾಹನಗಳು
ಅಪಘಾತದಿಂದ ನುಜ್ಜುಗುಜ್ಜಾಗಿರುವ ವಾಹನಗಳು   

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕತ್ತಲೆಕಾಡು ಸಮೀಪ ಬುಧವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

ಶಾಲಾ ವಾಹನ ಹಾಗೂ ಬೈಕ್ ಮಧ್ಯೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರರಿಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.

ಇಬ್ಬರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.