ADVERTISEMENT

ನಾಪೋಕ್ಲು: ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 13:09 IST
Last Updated 8 ಜೂನ್ 2024, 13:09 IST
ನಾಪೋಕ್ಲುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಖಾಸಗಿ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು.
ನಾಪೋಕ್ಲುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಖಾಸಗಿ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು.   

ನಾಪೋಕ್ಲು: ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಶಾಲೆಯಿಂದ ವಿದ್ಯಾರ್ಥಿಗಳನ್ನು ನೆಲಜಿ ಗ್ರಾಮಕ್ಕೆ ಕರೆದೊಯ್ದು ಬಸ್ ನೆಲಜಿ ಗ್ರಾಮದಿಂದ ಹಿಂತಿರುಗುವಾಗ ಕುಲ್ಲೇಟಿರ ರಾಜಾ ಎಂಬುವರ ಮನೆ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಆಧಾರವಾಗಿ ನಿಲ್ಲಿಸಿದ ಕಂಬದ ಸಹಾಯದಿಂದ ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿ ಚಾಲಕ ಮತ್ತು ಕ್ಲೀನರ್ ಮಾತ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT