ADVERTISEMENT

ಸುಂಟಿಕೊಪ್ಪ: ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಿಕ್ಷಕರು

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 3:58 IST
Last Updated 3 ಜೂನ್ 2025, 3:58 IST
ಸುಂಟಿಕೊಪ್ಪದ ಸೇಂಟ್‌ ಮೇರಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಸೋಮವಾರ ‌ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಹೂಮಳೆ ಗರೆಯಲಾಯಿತು    
ಸುಂಟಿಕೊಪ್ಪದ ಸೇಂಟ್‌ ಮೇರಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಸೋಮವಾರ ‌ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಹೂಮಳೆ ಗರೆಯಲಾಯಿತು       

ಸುಂಟಿಕೊಪ್ಪ: ಸುಂಟಿಕೊಪ್ಪದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸೋಮವಾರ
ಶಾಲಾ ಪ್ರಾರಂಭೋತ್ಸವ ನಡೆಯಿತು. ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಸ್ವಾಗತಿಸಿದರು.

ಸೇಂಟ್‌ ಮೇರಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಮುಖ್ಯಶಿಕ್ಷಕರು, ಶಿಕ್ಷಕರು ಶಾಲೆಯ ಮುಖ್ಯದ್ವಾರದಲ್ಲಿ ವಿದ್ಯಾರ್ಥಿಗಳಿಗೆ  ಹೂವನ್ನು ನೀಡಿ ಬರಮಾಡಿಕೊಂಡರು. ಹಿರಿಯ ವಿದ್ಯಾರ್ಥಿಗಳು ವಾದ್ಯಗಳ ಮೆರವಣಿಗೆಯೊಂದಿಗೆ ಕಿರಿಯರನ್ನು ಸಂಭ್ರಮದಿಂದ ಸ್ವಾಗತಿಸಿದರು.

ಎಲ್ಲ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಸ್ವಾಗತಿಸಲಾಯಿತು. ಶಾಲಾ ಆವರಣವನ್ನು ತಳಿರು–ತೋರಣಗಳಿಂದ ಅಲಂಕರಿಸಲಾಗಿತ್ತು.

ADVERTISEMENT

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರೀತಿಯ ಅಪ್ಪುಗೆಯೊಂದಿಗೆ ಹೂವು ನೀಡಿ ವಿದ್ಯಾರ್ಥಿಗಳನ್ನು  ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನದ ಬಿಸಿಯೂಟಕ್ಕೆ ಅನ್ನ, ಸಾಂಬಾರ್ ಹಾಗೂ ಕೇಸರಿ ಬಾತ್ ನೀಡಲಾಯಿತು.

‘ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೌಲಭ್ಯದೊಂದಿಗೆ ವಿವಿಧ ಸವಲತ್ತುಗಳನ್ನು ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು    ಮುಖ್ಯಶಿಕ್ಷಕಿ ಗೀತಾ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ಪ್ರೌಢಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ, ಗದ್ದೆಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸಿಹಿಯೊಂದಿಗೆ ಬಿಸಿಯೂಟ ವಿತರಿಸಲಾಯಿತು. 

ಕೊಡಗಿನಾದ್ಯಂತ ಸುರಿದ ಮಳೆಯ ಕಾರಣ ಶಾಲಾ ಪ್ರಾರಂಭೋತ್ಸವವನ್ನು ಮೇ 29ರ ಬದಲು ಸೋಮವಾರಕ್ಕೆ ಮುಂದೂಡಲಾಗಿತ್ತು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಲವಲವಿಕೆಯಿಂದ ಶಾಲೆಯತ್ತ ಹೆಜ್ಹೆ ಹಾಕಿದರು.

ಸರ್ಕಾರಿ ಪ್ರೌ‌ಢಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ, ಶಿಕ್ಷಕರು, ಸಂತ ಅಂತೋಣಿ ಶಾಲೆಯ ಮುಖ್ಯಶಿಕ್ಷಕಿ ಜೋವಿಟಾ ವಾಸ್, ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೆ.ಫಾ‌.ವಿಜಯ್ ಕುಮಾರ್, ಮುಖ್ಯಶಿಕ್ಷಕ ಸೆಲ್ವರಾಜ್, ಗದ್ದೆಹಳ್ಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಹೇಮಾಕುಮಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.