ಮಡಿಕೇರಿ: ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಇಲ್ಲಿನ ಗದ್ದಿಗೆ ಸಮೀಪದ ನಿವಾಸಿ ತುಫೈಲ್‌ಗಾಗಿ ಪೊಲೀಸರು ಶೋಧಕಾರ್ಯವನ್ನು ಚುರುಕುಗೊಳಿಸಿದ್ದಾರೆ.
ರಾಷ್ಟ್ರೀಯ ಭದ್ರತಾ ಏಜೆನ್ಸಿ ಈತನ ಸುಳಿವು ನೀಡಿದವರಿಗೆ ₹ 5 ಲಕ್ಷ ಬಹುಮಾನ ಘೋಷಿಸಿದೆ. ಪೊಲೀಸರು ಮಡಿಕೇರಿ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಜಾಲಾಡಿದರೂ ಆತನ ಸುಳಿವು ಲಭ್ಯವಾಗುತ್ತಿಲ್ಲ.
ವಿದೇಶಕ್ಕೆ ತೆರಳಿರುವ ಶಂಕೆಯೂ ಇದ್ದು, ಈ ಹಿನ್ನೆಲೆಯಲ್ಲೂ ನಿಗಾ ವಹಿಸಲಾಗಿದೆ. ಸೆಪ್ಟೆಂಬರ್‌ನಲ್ಲೂ ಎನ್‌ಐಎ ಎರಡು ಬಾರಿ ನಗರದಲ್ಲಿ ಶೋಧ ಕಾರ್ಯ ನಡೆಸಿ ಬರಿಗೈಯಲ್ಲಿ ವಾಪಸ್ ತೆರಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.