ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ-3: 605 ವಿದ್ಯಾರ್ಥಿಗಳ ನೋಂದಣಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 1:50 IST
Last Updated 9 ಜೂನ್ 2025, 1:50 IST
   

ಮಡಿಕೇರಿ: ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್ 9ರಿಂದ 20ವರೆಗೆ ನಡೆಯಲಿದ್ದು, ಒಟ್ಟು 605 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿರುವ ಈ ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆಯಲ್ಲಿ ತಲಾ ಒಂದೊಂದು ಕೇಂದ್ರದಲ್ಲಿ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿವೆ.

ಈಚೆಗೆ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಸೂಚಿಸಿದರು.

ADVERTISEMENT

ಪರೀಕ್ಷೆ-2 ನಡೆಸಿದಂತೆ ಪರೀಕ್ಷೆ-3 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಅವರು ಪರೀಕ್ಷೆ ಕುರಿತು ಮಾಹಿತಿ ನೀಡಿದರು. ಒಟ್ಟು 65 ಕಾಲೇಜುಗಳ 605 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಎಂದರು.

ವೆಬ್‍ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಖಜಾನೆ ಇಲಾಖೆ ಉಪ ನಿರ್ದೇಶಕರಾದ ಡಾ.ಬಿ.ಎನ್.ರಘುನಾಥ್, ತಹಶೀಲ್ದಾರರು, ಎಲ್ಲಾ ಮಾರ್ಗಾಧಿಕಾರಿಗಳು, 03 ಪರೀಕ್ಷಾ ಕೇಂದ್ರದ ಪರೀಕ್ಷಾ ಮುಖ್ಯ ಅಧೀಕ್ಷಕರು, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.