ADVERTISEMENT

ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್‌‌‌ಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 15:29 IST
Last Updated 22 ಜುಲೈ 2024, 15:29 IST
ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು   

ವಿರಾಜಪೇಟೆ: ಉನ್ನತ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಕೇಂದ್ರ ಸರ್ಕಾರ ನೀಡುವ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್ (PM USA) ಯೋಜನೆಗೆ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯ್ಕೆಯಾಗಿದೆ.

ಈ ಯೋಜನೆಯಡಿ ಆಯ್ಕೆಯಾದ ಸಂಸ್ಥೆಗೆ ಮೂಲಭೂತ ಸೌಲಭ್ಯ ಮತ್ತು ನವೀಕರಣ ಕಾಮಗಾರಿಗಾಗಿ ₹5 ಕೋಟಿ ಅನುದಾನ ದೊರೆಯಲಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಅಯ್ಕೆಯಾಗಿರುವುದರಿಂದ  ಅನುದಾನ ಈಗಾಗಲೇ ಮಂಜೂರಾಗಿದೆ. ಸರ್ಕಾರ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಗೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ ದಯಾನಂದ.ಕೆ.ಸಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT