ನಾಪೋಕ್ಲು: ಸಮೀಪದ ಬೇತು ಗ್ರಾಮದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ತೆ ಹಚ್ಚುವಲ್ಲಿ ನಾಪೋಕ್ಲು ಯಶಸ್ವಿಯಾಗಿದ್ದಾರೆ.
ಗ್ರಾಮದ ಬಸ್ ತಂಗುದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಾಗ ಪೊಲೀಸರು ದಾಳಿ ಮಾಡಿ, ಮಡಿಕೇರಿಯ ಆರ್.ವಿನೋದ್ ಹಾಗೂ ಬೇತು ಗ್ರಾಮದ ವಿಷ್ಣು ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ 230 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ನಾಪೋಕ್ಲು ಪಿಎಸ್‌ಐ ಈ.ಮಂಜುನಾಥ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.