ADVERTISEMENT

ಶನಿವಾರಸಂತೆ: ಮೋದಿ ಗ್ಯಾರೆಂಟಿ ಸಂಕಲ್ಪ ಯಾತ್ರೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 16:29 IST
Last Updated 3 ಜನವರಿ 2024, 16:29 IST
ಶನಿವಾರಸಂತೆ ನಾಡ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು
ಶನಿವಾರಸಂತೆ ನಾಡ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು   

ಶನಿವಾರಸಂತೆ: ಕೇಂದ್ರ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಸಂಕಲ್ಪಯಾತ್ರೆ ಮಂಗಳವಾರ ಶನಿವಾರಸಂತೆ ನಾಡ ಕಚೇರಿ ಆವರಣದಲ್ಲಿ ನಡೆಯಿತು.

ಶನಿವಾರಸಂತೆ ಗ್ರಾಮ ಪ‍ಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಆಹಮ್ಮದ್ ಉದ್ಘಾಟಿಸಿದರು. ಮಾಹಿತಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿರುವ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್,  ಪ್ರಧಾನಮಂತ್ರಿ ಜನ್‌ಧನ್ ಯೋಜನೆ, ಸುರಕ್ಷಾ ಬಿಮಾ ಯೋಜನೆ, ಜೀವನ್ ಜ್ಯೋತಿ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ, ಉಜ್ವಲ ಯೋಜನೆ, ಮುದ್ರಾ ಯೋಜನೆ, ಗ್ರಾಮೀಣ ಅವಾಜ್ ಯೋಜನೆ, ಸುಕನ್ಯಾ ಸಮೃದ್ದಿ ಯೋಜನೆ ಸೇರಿದಂತೆ ಹಲವು ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

2047ರ ಹೊತ್ತಿಗೆ ವಿಕಾಸದತ್ತ ಭಾರತ ಕುರಿತಾದ ಭಾಷಣದ ತುಣುಕು ಹಾಗೂ ಮಾಹಿತಿಗಳನ್ನು ಸಂಚಾರ ವಾಹನದಲ್ಲಿ ಅಳವಡಿಸಿರುವ ಎಲ್‍ಇಡಿ ಮೂಲಕ ಪ್ರದರ್ಶಿಸಲಾಯಿತು.

ADVERTISEMENT

ಯೂನಿಯನ್ ಬ್ಯಾಂಕ್ ಮೂಲಕ ವಿದ್ಯಾರ್ಥಿಗಳು, ನಿರುದ್ಯೋಗಿ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿದಂತೆ ರೈತರಿಗೆ, ಬಡಜನರಿಗೆ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಶನಿವಾರಸಂತೆ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಆಶ್ರಯತ್‍ ಪ್ರಭು ಮಾಹಿತಿ ನೀಡಿದರೆ ಕಾವೇರಿ ಗ್ರಾಮೀಣ ಬ್ಯಾಂಕ್‍ನಿಂದ ದೊರೆಯುವ ಸಾಲ ಸೌಲಭ್ಯಗಳ ಕುರಿತು ಶನಿವಾರಸಂತೆ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ರಂಜಿತ್ ಮಾಹಿತಿ ನೀಡಿದರು.

ಶನಿವಾರಸಂತೆ ಗ್ರಾಮ ಪಂಚಾಯಿತಿ ಸದಸ್ಯ ಎಸ್.ಎನ್.ರಘು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸರೋಜಮ್ಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಎಸ್.ಎನ್.ಪಾಂಡು, ಕೆ.ಪಿ.ಜಯಕುಮಾರ್ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.