
ಸೋಮವಾರಪೇಟೆ: ತಾಲ್ಲೂಕಿನ ಶಾಂತಳ್ಳಿ ಕುಮಾರಲಿಂಗೇಶ್ವರ ದೇವಾಲಯದ ಮಹಾ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳನ್ನು ಹಿರಿಯರು ಶ್ರದ್ಧಾ ಭಕ್ತಿಯಿಂದ ನಡೆಸಿಕೊಂಡು ಬಂದಿದ್ದಾರೆ. ಮುಂದಿನ ತಲೆಮಾರಿನವರೂ ಮುಂದುವರೆಸಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಪ್ರಮುಖರಾದ ಕೆ.ಕೆ. ಮುತ್ತಣ್ಣ, ಎಸ್.ಆರ್. ಉತ್ತಯ್ಯ, ಜಿ.ಎಸ್. ಮಧು ಕುಮಾರ್ ಇದ್ದರು.
ಧರ್ಮದರ್ಶಿ ಕೆ.ಕೆ. ಪೊನ್ನಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಡಿ.ಪಿ. ಜೋಯಪ್ಪ, ನಿವೃತ್ತ ನೀರುಗಂಟಿ ಎಸ್.ಜೆ. ರಾಜು, ಸಾಧಕ ವಿದ್ಯಾರ್ಥಿಗಳಾದ ಬೆಟ್ಟದಳ್ಳಿ ಕೆ.ಜಿ. ನಿಧಿ, ಬೆಂಕಳ್ಳಿಯ ಸಿ.ಎಸ್. ಆದ್ವಿ ಅವರನ್ನು ಸನ್ಮಾನಿಸಲಾಯಿತು.
ಫಲಪುಷ್ಪ, ವಸ್ತು ಪ್ರದರ್ಶನ, ವಿಶೇಷ ವಸ್ತುಗಳ ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದ ಕೃಷಿಕರಿಗೆ ಬಹುಮಾನ ವಿತರಿಸಲಾಯಿತು. ಹೋಬಳಿಯ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಬಡ್ಡಿ ಥ್ರೋಬಾಲ್ ಟೂರ್ನಿ
ಸೋಮವಾರಪೇಟೆ: ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕಗಳಾಗಿವೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು. ತಾಲ್ಲೂಕಿನ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದಿಂದ ಜಾತ್ರೋತ್ಸವದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟವನ್ನುವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಕರು ಹಳೆಯ ಕ್ರೀಡಾ ಪರಂಪರೆ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಕಬಡ್ಡಿ ವಾಲಿಬಾಲ್ ಮತ್ತು ಮಹಿಳಾ ವಿಭಾಗದ ಥ್ರೋಬಾಲ್ ವಿಜೇತರಿಗೆ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ವಿತರಿಸಲಾಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯುವಕ ಸಂಘದ ಅಧ್ಯಕ್ಷ ಡಿ.ಎಚ್. ನಿತಿನ್ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ. ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾಜಿ ಎಂಎಲ್ ಸಿ ಎಸ್.ಜಿ. ಮೇದಪ್ಪ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್ ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಈ. ಜಯೇಂದ್ರ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ ಯುವ ವೇದಿಕೆ ತಾಲ್ಲೂಕು ಅಧ್ಯಕ್ಷ ಚಕ್ರವರ್ತಿ ಸುರೇಶ್ ಹಿರಿಯ ಕಬಡ್ಡಿ ಆಟಗಾರರಾದ ತಲ್ತಾರೆ ಬಿದ್ದಪ್ಪ ಮಂಜೂರು ತಮ್ಮಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.