
ನಾಪೋಕ್ಲು: ಎಲ್ಲರೂ ಒಂದೇ ಎಂಬ ಮನೋಭಾವದೊಂದಿಗೆ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಶಾಸಕ ಎ.ಎಸ್. ಪೊನ್ನಣ ಹೇಳಿದರು.
ಇಲ್ಲಿಗೆ ಸಮೀಪದ ಚೆರಿಯಪರಂಬು ಉರುಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
‘ಪ್ರಪಂಚದ ಹಲವೆಡೆ ಯುದ್ಧ ನಡೆಯುತ್ತಿದೆ. ಯುದ್ಧ ನಿಲ್ಲಬೇಕು. ಎಲ್ಲರೂ ಮಾನವೀಯತೆಯನ್ನು ಮೆರೆಯಬೇಕು. ಸುಖ ಶಾಂತಿ ನೆಮ್ಮದಿಯ ಸಮಾಜ ನಿರ್ಮಾಣವಾಗಬೇಕು. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಾಮರಸ್ಯ ಸಾರಬೇಕು. ಪ್ರಪಂಚದ ಎಲ್ಲರೂ ಮಾನವೀಯತೆಯನ್ನು ಸಾರಿ ಒಂದಾಗಿ ಬಾಳಬೇಕು’ ಎಂದರು.
ಧರ್ಮ ಗುರುಗಳಿಂದ ಪಾರಾಯಣ ಜರುಗಿತು. ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಎ. ಅಹಮದ್ ಅಧ್ಯಕ್ಷತೆ ವಹಿಸಿದ್ದರು. ನಾಪೋಕ್ಲು ಪಟ್ಟಣದ ಮೊಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಎಂ. ಎಚ್. ಅಬ್ದುಲ್ ರೆಹಮಾನ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎ. ಇಸ್ಮಾಯಿಲ್, ಮಾಚೇಟಿರ ಕುಸು ಕುಶಾಲಪ್ಪ, ಮಹಮ್ಮದ್ ಟಿ.ಎ.ಮಸೀದಿಯ ಖತೀಬರಾದ ಮುಹಮ್ಮದ್ ಶಫೀಕ್ ಅಲಿ, ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.