ಕುಶಾಲನಗರ: ಸಮೀಪದ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯಿಂದ ಮೇ 7ರಂದು ಬಸವ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಬೆಳ್ಳಿ ರಥದಲ್ಲಿ ಬಸವೇಶ್ವರ ಭಾವಚಿತ್ರವನ್ನಿಟ್ಟು ಶೋಭಾಯಾತ್ರೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಮಹಿಳೆಯರು ಕಳಶ ಹೊತ್ತು ಸಾಗಲಿದ್ದಾರೆ. ಸಂಜೆ 6.30ಕ್ಕೆ ಗ್ರಾಮದ ಸಂತೆಮಾಳದಲ್ಲಿ ಬಸವ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎಸ್.ಜೆ.ಉಮೇಶ್ ತಿಳಿಸಿದ್ದಾರೆ.
ತೊರೆನೂರು ವಿರಕ್ತ ಮಠದ ಮಲ್ಲೇಶಸ್ವಾಮಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಕೊಡಗು ವಿ.ವಿ. ಕನ್ನಡ ಉಪನ್ಯಾಸಕ ಜಮೀಲ್ ಅಹ್ಮದ್ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕೆಪಿಸಿಸಿ ಸದಸ್ಯ ಎಚ್.ಕೆ.ನಟೇಶ್ ಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ವಿ.ನಂಜುಂಡಪ್ಪ ಭಾಗವಹಿಸಲಿದ್ದಾರೆ. ತೊರೆನೂರು ಗ್ರಾಮದ ಅಥ್ಲೆಟಿಕ್ ಕ್ರೀಡಾಪಟು ಟಿ.ಎಚ್.ಗಣೇಶ್ ಅವರನ್ನು ಗೌರವಿಸಲಾಗುವುದು ಎಂದು ಸಮಿತಿ ಕಾರ್ಯದರ್ಶಿ ಎನ್.ಎಸ್.ಜಯಣ್ಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.