ಸುಂಟಿಕೊಪ್ಪ: ಸಮೀಪದ ಕೆದಕಲ್ ನೇಗದಾಳು ಗ್ರಾಮದ ಐತಿಹಾಸಿಕ ಮಹಾದೇವ ಈಶ್ವರ ದೇವಾಲಯದ 8ನೇ ವಾರ್ಷಿಕೋತ್ಸವವು ನೂರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ನಡೆಯಿತು.
ಬೆಳಿಗ್ಗೆ ದೇವಾಲಯದ ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ಅವರ ನೇತೃತ್ವದಲ್ಕಿ ಗರ್ಭಗುಡಿಯ ಶುದ್ಧಪೂಜೆ ನಡೆದು ನಂತರ ಕೆರೆಯಿಂದ ಗಂಗಾಜಲ ತಂದು ಕುಂಭಪೂಜೆ ಮಾಡಲಾಯಿತು.
ನಂತರ ಗಣಪತಿ ಹೋಮ, ರುದ್ರಾಭಿಷೇಕ, ಹೂವಿನ ಪೂಜೆ, ನೈವೇದ್ಯ ಪೂಜೆಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ನೆರೆದಿದ್ದ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕೆದಕಲ್, ಸುಂಟಿಕೊಪ್ಪ, ಬಾಳೆಕಾಡು, ಗದ್ದೆಹಳ್ಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.